ಬೆಳಗಾವಿ: ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ₹35 ಲಕ್ಷ ಮೌಲ್ಯದ ಗೋವಾ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಾಚಿ ಗ್ರಾಮದ ಬಳಿ ವಶಪಡಿಸಿಕೊಂಡಿದ್ದಾರೆ. ಮೀನು ಸಾಗಿಸುವ ಕಂಟೇನರ್‌ನಲ್ಲಿ ಮದ್ಯವನ್ನು ಬಚ್ಚಿಟ್ಟು ಸಾಗಿಸಲಾಗುತ್ತಿತ್ತು. ವಾಹನದ ಚಾಲಕ ಪರಾರಿಯಾಗಿದ್ದಾನೆ. ವಾಹನ ಪರಿಶೀಲನೆ ನಡೆಸಿದಾಗ ಮೀನು ಮತ್ತು ಐಸ್ ಗಡ್ಡೆಗಳ ಕೆಳಗೆ ಬಚ್ಚಿಟ್ಟಿದ್ದ 350 ಬಾಕ್ಸ್ ಮದ್ಯ ಪತ್ತೆಯಾಗಿದೆ. ಮದ್ಯದ ಜೊತೆಗೆ ₹20 ಲಕ್ಷ ಮೌಲ್ಯದ ವಾಹನವನ್ನು ಕೂಡ ಜಪ್ತಿ ಮಾಡಲಾಗಿದೆ. ಕಳ್ಳಸಾಗಣೆ ತಡೆಯಲು ಅಬಕಾರಿ ಇಲಾಖೆ ತನಿಖೆ ಚುರುಕುಗೊಳಿಸಿದ್ದು, ಪರಾರಿಯಾದ ಚಾಲಕ ಹಾಗೂ ಇತರ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದೆ. ಮದ್ಯವನ್ನು ಸೇವಿಸದಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
