ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ಮೂಲದ ದುರ್ಗಮ (38) ಕೊಲೆಯಾದವರು. ಸುಮಾರು 19 ವರ್ಷಗಳ ಹಿಂದೆ ದುರ್ಗಮ ಮತ್ತು ಬಸವರಾಜ್ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ರಾತ್ರಿ 12.30ರ ಸುಮಾರಿಗೆ ದಂಪತಿ ನಡುವೆ ಜಗಳ ನಡೆದಿದ್ದು, ಈ ವೇಳೆ ಬಸವರಾಜ್ ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಮಗ ತನ್ನ ಸೋದರಮಾವನಿಗೆ ಮಾಹಿತಿ ನೀಡಿದ್ದು, ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಮಾರತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ಹಾಗೂ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
