ಬೆಂಗಳೂರು ಉತ್ತರ ತಾಲೂಕಿನ ಹನುಮಂತ ಸಾಗರ ಬಳಿ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಜಗಳವಾಡಿ ಬಿಟ್ಟುಹೋದ ಮನಸ್ತಾಪದಿಂದ ಪವನ್ ಕುಮಾರ್ (28) ಎಂಬ ಯುವಕ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಂಧ್ರಪ್ರದೇಶದ ಹಿಂದೂಪುರ ಮೂಲದ ಪವನ್, ನಾಗಮಣಿ ಎಂಬ ವಿವಾಹಿತ ಮಹಿಳೆಯೊಂದಿಗೆ ಎರಡು ವರ್ಷಗಳಿಂದ ವಾಸವಿದ್ದನು. ಆದರೆ ವಾರದ ಹಿಂದೆ ಇಬ್ಬರ ನಡುವೆ ಗಲಾಟೆಯಾಗಿದ್ದು, ನಾಗಮಣಿ ಸಂಬಂಧಿಕರ ಮನೆಗೆ ತೆರಳಿದ್ದರು. ಇದರಿಂದ ಬೇಸರಗೊಂಡ ಪವನ್, ಮಹಿಳೆಗೆ ಕರೆ ಮಾಡಿ ವಾಪಸ್ ಬರುವಂತೆ ಒತ್ತಾಯಿಸಿದ್ದಾನೆ. ಆಕೆ ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
