Breaking News

ಬೆಂಗಳೂರಿನಲ್ಲಿ ಕುಡಿದ ಮತ್ತಿನಲ್ಲಿ ಎಸ್‌ಐಗೆ ಕಪಾಳಮೋಕ್ಷ; ಕಾರ್ ಬ್ರೋಕರ್ ಅರೆಸ್ಟ್!

ಬೆಂಗಳೂರು: ಮದ್ಯದ ಮತ್ತಿನಲ್ಲಿ ಕಾರು ಚಲಾಯಿಸಿ ಮನೆಯ ಗೋಡೆಗೆ ಡಿಕ್ಕಿ ಹೊಡೆದಿದ್ದಲ್ಲದೆ, ಸ್ಥಳಕ್ಕೆ ಬಂದ ಸಂಚಾರಿ ಪೊಲೀಸ್ ಎಸ್‌ಐಗೆ ಕಪಾಳಮೋಕ್ಷ ಮಾಡಿದ ಕಾರ್ ಬ್ರೋಕರ್ ಸಚಿನ್‌ನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ಸಚಿನ್ ಮದ್ಯಪಾನ ಮಾಡಿ ಕಾರು ಚಲಾಯಿಸುವಾಗ ಮನೆಯ ಗೋಡೆಗೆ ಡಿಕ್ಕಿ ಹೊಡೆದಿದ್ದ. ಈ ಬಗ್ಗೆ ಮನೆ ಮಾಲೀಕರು 112ಕ್ಕೆ ಕರೆ ಮಾಡಿದ್ದರು. ಸ್ಥಳಕ್ಕೆ ಬಂದ ಎಸ್‌ಐ ಕೃಷ್ಣ ಅವರು ವಿಚಾರಣೆ ನಡೆಸಿದಾಗ ಸಚಿನ್ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಪ್ರಕರಣ ದಾಖಲಿಸಿಕೊಂಡ ಬ್ಯಾಡರಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Share News

About BigTv News

Check Also

ಬಾಕಿ ವೇತನ ಕೇಳಿದಕ್ಕೆ ನೀರಿನ ಟ್ಯಾಂಕರ್‌ ಚಾಲಕನ ಮೇಲೆ ಹಲ್ಲೆ: ಮೂವರ ಬಂಧನ

ಬೆಂಗಳೂರು: ಬಾಕಿ ವೇತನ ನೀಡುವಂತೆ ಕೇಳಿದ್ದಕ್ಕೆ ನೀರಿನ ಟ್ಯಾಂಕರ್ ಚಾಲಕನ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಮಾಲೀಕ ಸೇರಿ …

Leave a Reply

Your email address will not be published. Required fields are marked *