Breaking News

ಡ್ರಿಂಕ್ ಆಯಂಡ್ ಡ್ರೈವ್ ಕೇಸ್ ಹಾಕುತ್ತಿದ್ದ ಪೊಲೀಸ್ ಪೇದೆಯೇ ಮದ್ಯದ ಅಮಲಿನಲ್ಲಿದ್ದರಾ? ಚಿಕ್ಕೋಡಿಯಲ್ಲಿ ಸಾರ್ವಜನಿಕರ ಆಕ್ರೋಶ!

ಬೆಳಗಾವಿ: ಚಿಕ್ಕೋಡಿಯಲ್ಲಿ ಮದ್ಯದ ಅಮಲಿನಲ್ಲಿ ಸಂಚಾರಿ ಪೊಲೀಸ್ ಪೇದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೆ.ಸಿ. ರಸ್ತೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಪೇದೆ ವೈ.ಎಂ. ಪಾಟೀಲ್ ಅವರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಪೇದೆಯ ವರ್ತನೆ ಕಂಡು ಅನುಮಾನಗೊಂಡ ಸಾರ್ವಜನಿಕರು, ನೀವೇ ಕುಡಿದುಕೊಂಡು ಬೇರೆಯವರಿಗೆ ಡ್ರಿಂಕ್ ಆ್ಯಂಡ್ ಡ್ರೈವ್ ಕೇಸ್ ಹಾಕುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲ ಉಂಟಾಗಿದೆ. ಪೇದೆ ಮದ್ಯಪಾನ ಮಾಡಿದ್ದಾರೆಯೇ ಎಂಬುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಡಬೇಕಿದೆ. ಆರೋಪ ಸಾಬೀತಾದರೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

Share News

About BigTv News

Check Also

ಜೇವರ್ಗಿ: ಕ್ಷುಲ್ಲಕ ಕಾರಣಕ್ಕೆ ಗಲಾಟೆ; ಹಲವರಿಗೆ ಗಂಭೀರ ಗಾಯ

ಕಲಬುರಗಿ: ಜಿಲ್ಲೆಯ ಗಂವ್ಹಾರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಬಣಗಳ ನಡುವೆ ನಡೆದ ಗಲಾಟೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. …

Leave a Reply

Your email address will not be published. Required fields are marked *