Breaking News

ಜೇವರ್ಗಿ: ಕ್ಷುಲ್ಲಕ ಕಾರಣಕ್ಕೆ ಗಲಾಟೆ; ಹಲವರಿಗೆ ಗಂಭೀರ ಗಾಯ

ಕಲಬುರಗಿ: ಜಿಲ್ಲೆಯ ಗಂವ್ಹಾರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಬಣಗಳ ನಡುವೆ ನಡೆದ ಗಲಾಟೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೈಯದ್ ಅಕ್ಕಣಿ ಅಕ್ಕಲಸಾಬ್ ಜಾತ್ರೆಯ ಅಂಗವಾಗಿ ಕಾರ್ಯಕ್ರಮಗಳು ನಡೆಯುತ್ತಿದ್ದವು. ಸೋಮವಾರ ಸಿಗರೇಟ್ ಖರೀದಿಸುವ ವಿಚಾರಕ್ಕೆ ಆರಂಭವಾದ ಜಗಳವನ್ನು ಮುಖಂಡರು ಬಿಡಿಸಿದ್ದರು. ಆದರೆ ಮಂಗಳವಾರ ಮತ್ತೆ ಗಲಾಟೆ ನಡೆದಿದ್ದು, ಎರಡೂ ಬಣಗಳ ಹಲವರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕೆಎಸ್‌ಆರ್‌ಪಿ ಎರಡು ತುಕಡಿಗಳನ್ನು ನಿಯೋಜಿಸಲಾಗಿದ್ದು, ಮಧ್ಯಾಹ್ನದವರೆಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರಲಿಲ್ಲ.

Share News

About BigTv News

Check Also

ಡ್ರಿಂಕ್ ಆಯಂಡ್ ಡ್ರೈವ್ ಕೇಸ್ ಹಾಕುತ್ತಿದ್ದ ಪೊಲೀಸ್ ಪೇದೆಯೇ ಮದ್ಯದ ಅಮಲಿನಲ್ಲಿದ್ದರಾ? ಚಿಕ್ಕೋಡಿಯಲ್ಲಿ ಸಾರ್ವಜನಿಕರ ಆಕ್ರೋಶ!

ಬೆಳಗಾವಿ: ಚಿಕ್ಕೋಡಿಯಲ್ಲಿ ಮದ್ಯದ ಅಮಲಿನಲ್ಲಿ ಸಂಚಾರಿ ಪೊಲೀಸ್ ಪೇದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೆ.ಸಿ. ರಸ್ತೆಯಲ್ಲಿ ವಾಹನ …

Leave a Reply

Your email address will not be published. Required fields are marked *