ಬೆಂಗಳೂರು: ಬಾಗಲೂರು ಸಮೀಪದ ಮಂಚಪ್ಪನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಬನ್ನೇರುಘಟ್ಟ ರಸ್ತೆ ನಿವಾಸಿ ಇಮ್ರಾನ್ ಪಾಷ ಎಂದು ಗುರುತಿಸಲಾಗಿದೆ. ಇಮ್ರಾನ್ ಪಾಷ ಅವರ ಹಣೆಯ ಬಲಭಾಗದಲ್ಲಿ ಗುಂಡೇಟಿನ ಗಾಯ ಕಂಡುಬಂದಿದ್ದು, ಕಾರಿನ ಬಳಿ ಖಾಲಿ ಬುಲೆಟ್ ಪತ್ತೆಯಾಗಿದೆ. ಅವರು ಸ್ಕ್ರ್ಯಾಪ್ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಹೀಗಾಗಿ ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಬಾಗಲೂರು ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಹಣಕಾಸಿನ ವ್ಯವಹಾರ ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಸಾವಿನ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

