Breaking News

30 ಸಾವಿರ ರೂ. ಲಂಚಕ್ಕೆ ಬೇಡಿಕೆ ಆರೋಪ; 2 ಸಾವಿರ ರೂ. ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಎಸಿ ಕಚೇರಿ ಸಿಬ್ಬಂದಿ

ಬೆಳಗಾವಿ: ಎಸಿ ಕೋರ್ಟ್‌ಗೆ ಪ್ರಕರಣಗಳನ್ನು ವರ್ಗಾವಣೆ ಮಾಡಿಕೊಡಲು ₹30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಉಪವಿಭಾಗಾಧಿಕಾರಿ ಕಚೇರಿಯ ಎಸ್‌ಡಿಎ ಸಿಬ್ಬಂದಿ ಪದ್ಮಾಕರ್ ಪಾಟೀಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶುಭಂ ಅಪ್ಪಾರಾವ್ ಎಂಬುವವರಿಂದ ಮೊದಲ ಕಂತಾಗಿ ₹2 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ. ಲಂಚದ ಬೇಡಿಕೆಯಿಂದ ಬೇಸತ್ತ ದೂರುದಾರರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಲೋಕಾಯುಕ್ತ ಎಸ್‌ಪಿ ಪ್ರಸನ್ನ ದೇಸಾಯಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದ್ದು, ಆರೋಪಿ ಸಿಬ್ಬಂದಿಯನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಪ್ರಕ್ರಿಯೆ ಕೈಗೊಳ್ಳಲಾಗಿದೆ.

Share News

About BigTv News

Check Also

ಡ್ರಿಂಕ್ ಆಯಂಡ್ ಡ್ರೈವ್ ಕೇಸ್ ಹಾಕುತ್ತಿದ್ದ ಪೊಲೀಸ್ ಪೇದೆಯೇ ಮದ್ಯದ ಅಮಲಿನಲ್ಲಿದ್ದರಾ? ಚಿಕ್ಕೋಡಿಯಲ್ಲಿ ಸಾರ್ವಜನಿಕರ ಆಕ್ರೋಶ!

ಬೆಳಗಾವಿ: ಚಿಕ್ಕೋಡಿಯಲ್ಲಿ ಮದ್ಯದ ಅಮಲಿನಲ್ಲಿ ಸಂಚಾರಿ ಪೊಲೀಸ್ ಪೇದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೆ.ಸಿ. ರಸ್ತೆಯಲ್ಲಿ ವಾಹನ …

Leave a Reply

Your email address will not be published. Required fields are marked *