ಬೆಂಗಳೂರು: ದೇವನಹಳ್ಳಿ ತಾಲೂಕಿನ ಪುರ ಗ್ರಾಮದಲ್ಲಿ ಮಧ್ಯರಾತ್ರಿ ಮುಸುಕುಧಾರಿ ದರೋಡೆಕೋರರ ತಂಡವೊಂದು ಮನೆಯ ಬಾಗಿಲು ಒಡೆದು ಒಳನುಗ್ಗಿ ದಂಪತಿಗೆ ಚಾಕು ತೋರಿಸಿ ಬೆದರಿಸಿ ದರೋಡೆ ಮಾಡಿದೆ. ಮಾರೇಗೌಡ ಎಂಬುವವರ ಮನೆಗೆ ನುಗ್ಗಿದ ಮೂವರು ದರೋಡೆಕೋರರು, ಸುಮಾರು 117 ಗ್ರಾಂ ಚಿನ್ನಾಭರಣ ಹಾಗೂ ₹8 ಸಾವಿರ ನಗದು ದೋಚಿದ್ದಾರೆ. ಬಳಿಕ ದಂಪತಿಯ ಮೊಬೈಲ್‌ಗಳನ್ನೂ ಕಸಿದುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ವಿಜಯಪುರ ಠಾಣೆ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
