Breaking News

ರಾಜ್ಯದ 5 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಹಾಸನದಲ್ಲಿ ಬಾಲಕನ ಶಾಲಾ ಬ್ಯಾಗ್, ಪ್ಯಾಂಟ್ ಜೇಬಿನಲ್ಲಿ ನೋಟಿನ ಕಂತೆ ಪತ್ತೆ

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಇಂದು ಐದು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಅಧಿಕಾರಿಗಳ ಮನೆ, ಕಚೇರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಹಾಸನ, ಚಿತ್ರದುರ್ಗ, ಬಾಗಲಕೋಟೆ, ಬೀದರ್ ಹಾಗೂ ಹುಬ್ಬಳ್ಳಿಯಲ್ಲಿ ದಾಳಿ ನಡೆದಿದ್ದು, ಆಸ್ತಿ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.

ಹಾಸನ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ನಿವಾಸದ ಮೇಲೆ ದಾಳಿ ವೇಳೆ, ಬಾಲಕನ ಶಾಲಾ ಬ್ಯಾಗ್ ಹಾಗೂ ಪ್ಯಾಂಟ್ ಜೇಬಿನಲ್ಲಿ ಹಣ ಸಾಗಿಸಲು ಯತ್ನಿಸಿದಾಗ ₹500 ಮುಖಬೆಲೆಯ ನೋಟುಗಳ ಕಂತೆ ಪತ್ತೆಯಾಗಿದೆ ಎನ್ನಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಕುಟುಂಬಸ್ಥರಿಗೆ ತಪಾಸಣೆಗೆ ಸಹಕರಿಸುವಂತೆ ಸೂಚಿಸಿದ್ದಾರೆ.

ಚಿತ್ರದುರ್ಗ, ಬಾಗಲಕೋಟೆ, ಬೀದರ್ ಹಾಗೂ ಹುಬ್ಬಳ್ಳಿ: ಜಿಲ್ಲಾ ಸರ್ಜನ್ ಡಾ. ರವೀಂದ್ರ, ಇನ್ಸ್‌ಪೆಕ್ಟರ್ ವೆಂಕಟೇಶ್, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಸಂಜೀವ ಹಿಪ್ಪರಗಿ, ಬ್ರೀಮ್ಸ್ ನರ್ಸಿಂಗ್ ಕಾಲೇಜು ಪ್ರಾಂಶುಪಾಲ ರಾಜಕುಮಾರ್ ಮಾಳಗೆ ಹಾಗೂ ಕೆಎಸ್‌ಆರ್‌ಟಿಸಿ ಚಾಲಕ-ನಿರ್ವಾಹಕ ಷಡಕ್ಷರಯ್ಯ ಅವರಿಗೆ ಸೇರಿದ ಮನೆ, ಕಚೇರಿ ಮತ್ತು ಇತರ ಸ್ಥಳಗಳಲ್ಲಿ ದಾಳಿ ನಡೆಸಿ ಆಸ್ತಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.

Share News

About BigTv News

Check Also

ಮನೆಯ ಮಾಲೀಕನಿಗೆ ಚಾಕು ತೋರಿಸಿ ಚಿನ್ನ, ನಗದು ದರೋಡೆ!

ಬೆಂಗಳೂರು: ದೇವನಹಳ್ಳಿ ತಾಲೂಕಿನ ಪುರ ಗ್ರಾಮದಲ್ಲಿ ಮಧ್ಯರಾತ್ರಿ ಮುಸುಕುಧಾರಿ ದರೋಡೆಕೋರರ ತಂಡವೊಂದು ಮನೆಯ ಬಾಗಿಲು ಒಡೆದು ಒಳನುಗ್ಗಿ ದಂಪತಿಗೆ ಚಾಕು …

Leave a Reply

Your email address will not be published. Required fields are marked *