Breaking News

ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಮಹಿಳೆಗೆ ನೆರವಿನ ಸೋಗಿನಲ್ಲಿ ವಂಚನೆ – ಲ್ಯಾಪ್‌ಟಾಪ್‌, ಬ್ಯಾಗ್ ದೋಚಿದ ಕಳ್ಳ!

ಬೆಂಗಳೂರು: ರಸ್ತೆಯಲ್ಲಿ ಬಿದ್ದು ಗಾಯಗೊಂಡಿದ್ದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಕಳ್ಳನೊಬ್ಬ ಆಕೆಯ ಲ್ಯಾಪ್‌ಟಾಪ್ ಬ್ಯಾಗ್ ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಹೆಣ್ಣೂರು ರಿಂಗ್ ರಸ್ತೆಯ ಅಂಡರ್‌ಪಾಸ್ ಬಳಿ ನಡೆದಿದೆ. ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ 39 ವರ್ಷದ ಪದ್ಮಾವತಿ ಅವರು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಮಳೆ ನೀರು ನಿಂತಿದ್ದ ಗುಂಡಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದರು. ಈ ವೇಳೆ ಸಹಾಯಕ್ಕೆ ಬಂದ ಅಪರಿಚಿತ ವ್ಯಕ್ತಿ ಜನರ ಗಮನ ಬೇರೆಡೆ ಇದ್ದಾಗ ಬ್ಯಾಗ್ ಎಗರಿಸಿದ್ದಾನೆ. ಬ್ಯಾಗ್‌ನಲ್ಲಿ ಲ್ಯಾಪ್‌ಟಾಪ್, ಇಯರ್‌ಬಡ್ಸ್, ಚಾರ್ಜರ್ ಹಾಗೂ ನಗದು ಸೇರಿ ಒಟ್ಟು ₹94 ಸಾವಿರ ಮೌಲ್ಯದ ವಸ್ತುಗಳಿದ್ದವು. ನವೆಂಬರ್ 14ರಂದು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ರಾಜ್ಯದ 5 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಹಾಸನದಲ್ಲಿ ಬಾಲಕನ ಶಾಲಾ ಬ್ಯಾಗ್, ಪ್ಯಾಂಟ್ ಜೇಬಿನಲ್ಲಿ ನೋಟಿನ ಕಂತೆ ಪತ್ತೆ

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಇಂದು ಐದು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ …

Leave a Reply

Your email address will not be published. Required fields are marked *