Breaking News

ವ್ಯಕ್ತಿಯ ಕೈಕಾಲು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಬೆಂಗಳೂರು: ವ್ಯಕ್ತಿಯ ಕೈಕಾಲು ಕಟ್ಟಿಹಾಕಿ ಪೆಟ್ರೋಲ್ ಸುರಿದು ನಡುರಸ್ತೆಯಲ್ಲೇ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿರುವ ಭೀಕರ ಘಟನೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಯ್ಯದ್ ಹಾಜಿ ಅಲಿಯಾಸ್ ಮೊಹಮ್ಮದ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳಗ್ಗೆ 6ರಿಂದ 6.30ರ ಸುಮಾರಿಗೆ ಸುಟ್ಟ ಗಾಯಗಳಿಂದ ವ್ಯಕ್ತಿ ರಸ್ತೆಯಲ್ಲಿ ನರಳಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರ ದೇಹದ ಶೇ.50ರಿಂದ 70ರಷ್ಟು ಭಾಗ ಸುಟ್ಟಿದೆ. ಎದೆ ಹಾಗೂ ಶ್ವಾಸಕೋಶಕ್ಕೂ ಹಾನಿಯಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಕಾರಣ ಹಾಗೂ ಆರೋಪಿಗಳ ಪತ್ತೆಗಾಗಿ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಗಿರಿನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ರಾಜ್ಯದ 5 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಹಾಸನದಲ್ಲಿ ಬಾಲಕನ ಶಾಲಾ ಬ್ಯಾಗ್, ಪ್ಯಾಂಟ್ ಜೇಬಿನಲ್ಲಿ ನೋಟಿನ ಕಂತೆ ಪತ್ತೆ

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಇಂದು ಐದು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ …

Leave a Reply

Your email address will not be published. Required fields are marked *