ಉಡುಪಿ: ಸಿಬಿಐ ಹಾಗೂ ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಂದ ₹15.98 ಲಕ್ಷ ವಂಚಿಸಿರುವ ಘಟನೆ ನಡೆದಿದೆ. ಈ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶೇಷಾಚಲ (51) ಅವರಿಗೆ ದೆಹಲಿ ಸಿಬಿಐ ಪೊಲೀಸರು ಎಂದು ಕರೆ ಮಾಡಿ, ಅವರ ಹೆಸರಿನಲ್ಲಿ ಮನಿ ಲಾಂಡರಿಂಗ್, ಡ್ರಗ್ಸ್ ಹಾಗೂ ಕಿಡ್ನಾಪಿಂಗ್ ಪ್ರಕರಣ ದಾಖಲಾಗಿದೆ ಎಂದು ಆರೋಪಿಗಳು ಬೆದರಿಸಿದ್ದಾರೆ. ಬಳಿಕ ವಿಡಿಯೋ ಕರೆ ಮಾಡಿ, ಯಾರಿಗೂ ಮಾಹಿತಿ ನೀಡದಂತೆ ಸೂಚಿಸಿ, ಹಣ ಹಾಗೂ ಬ್ಯಾಂಕ್ ಖಾತೆಯ ವಿವರಗಳನ್ನು ಪಡೆದುಕೊಂಡಿದ್ದಾರೆ. ಆರೋಪಿಗಳ ಮಾತು ನಂಬಿದ ಶೇಷಾಚಲ ಅವರು ಅ.31ರಂದು ₹11 ಲಕ್ಷ ಹಾಗೂ ನ.5ರಂದು ₹4,98,976 ಹಣವನ್ನು ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದಾರೆ. ಒಟ್ಟು ₹15,98,976 ಹಣ ವರ್ಗಾಯಿಸಿಕೊಂಡು ವಂಚಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
