ವಿಜಯನಗರ: ಪ್ರೇಮ ವಿವಾಹದ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಮಾರಾಮಾರಿ ನಡೆದ ಘಟನೆ ಹರಪನಹಳ್ಳಿ ತಾಲೂಕಿನ ಸತ್ತೂರು ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಘಟನೆಯಲ್ಲಿ ಐದಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ನಾಲ್ಕು ದಿನಗಳ ಹಿಂದಷ್ಟೇ ಗ್ರಾಮದ ಪ್ರೇಮಿಗಳು ವಿವಾಹವಾಗಿದ್ದರು. ಇದರಿಂದ ಆಕ್ರೋಶಗೊಂಡ ಯುವತಿಯ ಸಮುದಾಯದವರು ಯುವಕನ ಮನೆಗೆ ನುಗ್ಗಿ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳ ಮೇಲೂ ಹಲ್ಲೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
