ಮಂಗಳೂರು: ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವೆಲೆನ್ಸಿಯಾ ಚರ್ಚ್‌ನ ಧರ್ಮಗುರು ಸಿಪ್ರಿಯನ್ ಪಿಂಟೊ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಪೆರ್ಮನ್ನೂರು ಚರ್ಚ್‌ನಲ್ಲಿ ಪಾದ್ರಿಯಾಗಿದ್ದಾಗ ಬಾಲಕನಿಗೆ ಕಿರುಕುಳ ನೀಡಿದ ಆರೋಪದಡಿ ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪಿಗೆ ಡಿ.2ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಹಿಂದೆ ಇದೇ ರೀತಿಯ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಪಾದ್ರಿಗೆ ನ್ಯಾಯಾಲಯ ಜಾಮೀನು ನೀಡಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news
