ಕನಕಪುರ: ಹಾಡಹಗಲೇ ಮನೆಯ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿಯೊಬ್ಬ ಗ್ರಾಮಸ್ಥರಿಗೆ ಸಿಕ್ಕಿಬಿದ್ದು ಹಲ್ಲೆಗೊಳಗಾಗಿದ್ದಾನೆ. ಬಳಿಕ ಹಲ್ಲೆ ಮಾಡಿದವರ ವಿರುದ್ಧವೇ ಪೊಲೀಸರಿಗೆ ದೂರು ನೀಡಿರುವ ಘಟನೆ ತೊಪ್ಪಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೋಲಾರ ಮೂಲದ ಸೈಯದ್ ಅಹಮದ್ (39) ಬಂಧಿತ ಆರೋಪಿ. ಕಳೆದ ಶುಕ್ರವಾರ ಮಧ್ಯಾಹ್ನ ಬೀಗ ಹಾಕಿದ್ದ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದಾಗ ಗ್ರಾಮಸ್ಥರು ಹಿಡಿದು ಹಲ್ಲೆ ನಡೆಸಿದ್ದಾರೆ. ಈತನ ವಿರುದ್ಧ ಹಲವು ಕಳ್ಳತನ ಪ್ರಕರಣಗಳಿದ್ದು, ಈ ಹಿಂದೆಯೂ ಜೈಲು ಶಿಕ್ಷೆ ಅನುಭವಿಸಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ತನ್ನ ಮೇಲೆ ಹಲ್ಲೆ ನಡೆಸಿದ ಗ್ರಾಮಸ್ಥರ ವಿರುದ್ಧ ಆತ ದೂರು ನೀಡಿದ್ದು, ಕನಕಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
