Breaking News

ಮೈಸೂರಿನಲ್ಲಿ ಭೀಕರ ಕೃತ್ಯ: ತೋಟದ ಮನೆಯಲ್ಲಿ ವಾಸವಿದ್ದ ರೈತನ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ!

ಮೈಸೂರು: ತೋಟದ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದ ರೈತನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಎಚ್.ಡಿ. ಕೋಟೆ ತಾಲೂಕಿನ ಬೆಳತ್ತೂರು ಬಿ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಕುಮಾರ್ (58) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ತೋಟದ ಮನೆಯಲ್ಲಿದ್ದ ಕುಮಾರ್ ಅವರ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಹತ್ಯೆಗೈದು ಪರಾರಿಯಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಎಚ್.ಡಿ. ಕೋಟೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಪ್ರೇಮ ವಿವಾಹದ ಕಿಚ್ಚಿಗೆ ಗ್ರಾಮದಲ್ಲಿ ಉದ್ವಿಗ್ನತೆ; ಮಹಿಳೆಯರು, ಮಕ್ಕಳ ಮೇಲೂ ಹಲ್ಲೆ!

ವಿಜಯನಗರ: ಪ್ರೇಮ ವಿವಾಹದ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಮಾರಾಮಾರಿ ನಡೆದ ಘಟನೆ ಹರಪನಹಳ್ಳಿ ತಾಲೂಕಿನ ಸತ್ತೂರು ಗೊಲ್ಲರಹಟ್ಟಿಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *