Breaking News

ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

ಕಲಬುರಗಿ: 40 ವರ್ಷದ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸ್ ಕಾನ್‌ಸ್ಟೇಬಲ್ ಸೈಯದ್ ತೌಸಿಫ್ ಹುಸೇನ್ (41) ವಿರುದ್ಧ ಪ್ರಕರಣ ದಾಖಲಾಗಿದೆ. 2023ರಲ್ಲಿ ಪೊಲೀಸ್ ಪ್ರಕರಣವೊಂದರಲ್ಲಿ ಸಹಾಯ ಮಾಡುವ ಮೂಲಕ ಮಹಿಳೆಯ ಪರಿಚಯ ಮಾಡಿಕೊಂಡಿದ್ದ ಆರೋಪಿ, ಪ್ರೀತಿಸುವಂತೆ ಒತ್ತಾಯಿಸಿ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಆಗಸ್ಟ್ 7ರಂದು ಮಹಿಳೆಯ ಮನೆಗೆ ನುಗ್ಗಿ ಹಲ್ಲೆ ನಡೆಸಿ, ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಕುರಿತು ನವೆಂಬರ್ 15ರಂದು ಮಹಿಳೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಬರೋಬ್ಬರಿ 45 ಕೋಟಿ ಭೂ ಹಗರಣ: ಬಾಗೇಪಲ್ಲಿ ತಹಶೀಲ್ದಾರ್ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶ: ನಾಲ್ವರು ಸಿಬ್ಬಂದಿಗಳು ಅಮಾನತು

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಹಶೀಲ್ದಾರ್ ಮನೀಷಾ ಪತ್ರಿ ವಿರುದ್ಧ ₹45 ಕೋಟಿ ಮೌಲ್ಯದ ಭೂ ಅಕ್ರಮದ ಆರೋಪ ಕೇಳಿಬಂದಿದೆ. ನಾಲ್ವರು …

Leave a Reply

Your email address will not be published. Required fields are marked *