ಹುಬ್ಬಳ್ಳಿ: ನಗರದ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಕುಟುಂಬಗಳ ನಡುವಿನ ವೈಷಮ್ಯ ತಾರಕಕ್ಕೇರಿದ್ದು, ಗ್ಯಾಂಗ್ ವಾರ್ ಸ್ವರೂಪ ಪಡೆದುಕೊಂಡಿದೆ ಎನ್ನಲಾಗಿದೆ. ರೌಡಿಶೀಟರ್ ಶ್ಯಾಮ್ ಜಾಧವ್ ಕುಟುಂಬ ಹಾಗೂ ಬಸವರಾಜ್ ಜಾಧವ್ ಕುಟುಂಬದ ನಡುವೆ ಗಲಾಟೆ ನಡೆದಿದೆ. ಹಾಡಹಗಲೇ ಲಾಂಗ್, ಮಚ್ಚುಗಳನ್ನು ಪ್ರದರ್ಶಿಸಿ ಆತಂಕ ಸೃಷ್ಟಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಪೊಲೀಸ್ ಠಾಣೆಯಲ್ಲಿಯೇ ಪೊಲೀಸರ ಎದುರು ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದ್ದು, ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಯಾವ ಕ್ರಮ ಕೈಗೊಳ್ಳಲಿದೆ ಎಂಬ ಪ್ರಶ್ನೆ ಎದುರಾಗಿದೆ. ಎರಡು ಕುಟುಂಬಗಳ ನಡುವಿನ ಸಂಘರ್ಷಕ್ಕೆ ಕಡಿವಾಣ ಹಾಕಲು ಪೊಲೀಸರು ಮುಂದಾಗುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

