ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಢವಳಗಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ ವಯೋವೃದ್ಧ ರೈತ ಶಾಂತಗೌಡ ಪಾಟೀಲ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ರೈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹೊಲಕ್ಕೆ ಹೋಗುವ ರಸ್ತೆಯಲ್ಲಿ ನೀರಿನ ಗಾಡಿ ನಿಲ್ಲಿಸಿ ಸಂಚಾರಕ್ಕೆ ತೊಂದರೆ ಮಾಡುತ್ತಿದ್ದುದನ್ನು ರೈತ ಪ್ರಶ್ನಿಸಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಚಾಕುವಿನಿಂದ ಇರಿದ ರಿಯಾಜ ಯಮನೂರಿ ನದಾಫನನ್ನು ಸಾರ್ವಜನಿಕರು ಹಿಡಿದು ಥಳಿಸಿದ್ದಾರೆ. ಈ ವೇಳೆ ರಿಯಾಜನ ತಂದೆ ಯಮನೂರಪ್ಪ ಕೊಡಲಿಯಿಂದ ಹಲ್ಲೆ ನಡೆಸಲು ಬಂದಿದ್ದು, ಇಬ್ಬರನ್ನೂ ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

