ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಹಶೀಲ್ದಾರ್ ಮನೀಷಾ ಪತ್ರಿ ವಿರುದ್ಧ ₹45 ಕೋಟಿ ಮೌಲ್ಯದ ಭೂ ಅಕ್ರಮದ ಆರೋಪ ಕೇಳಿಬಂದಿದೆ. ನಾಲ್ವರು ರೈತರಿಗೆ ಸೇರಿದ 15 ಎಕರೆ ಜಮೀನನ್ನು ನಕಲಿ ದಾಖಲೆಗಳ ಮೂಲಕ ಗ್ರಾಮ ಸಹಾಯಕಿ ಹೆಸರಿಗೆ ಖಾತೆ ಮಾಡಲಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಸಹಾಯಕಿಯನ್ನು ವಜಾಗೊಳಿಸಿ, ಮೂವರು ಕಂದಾಯ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತಹಶೀಲ್ದಾರ್ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ. ಆದರೆ, ಇದು ಕಣ್ತಪ್ಪಿನಿಂದ ನಡೆದ ಖಾತೆ ಬದಲಾವಣೆ ಎಂದು ತಹಶೀಲ್ದಾರ್ ಸ್ಪಷ್ಟನೆ ನೀಡಿದ್ದಾರೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಯಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
