ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅರಳಿಕಟ್ಟಿ ಗ್ರಾಮದ ಹಮ್ಮವ್ವಾ ಸನದಿ (78) ಅವರನ್ನು ಗೃಹಲಕ್ಷ್ಮೀ ಹಣದ ವಿಚಾರವಾಗಿ ಮೊಮ್ಮಗ ಭೀಮಪ್ಪ ಸನದಿ (20) ಕೊಲೆ ಮಾಡಿರುವ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ನ.10ರಂದು ಅಜ್ಜಿಯನ್ನು ಬೈಕ್‌ನಲ್ಲಿ ಕರೆದೊಯ್ದ ಆರೋಪಿ, ಹಣ ನೀಡಲು ನಿರಾಕರಿಸಿದ್ದಕ್ಕೆ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಶವವನ್ನು ಎರಡು ಗೋಣಿ ಚೀಲಗಳಲ್ಲಿ ತುಂಬಿ ಕಲ್ಲು ಕಟ್ಟಿ ಘಟಪ್ರಭಾ ನದಿ ಡ್ಯಾಂನ ಹಿನ್ನೀರಿನಲ್ಲಿ ಎಸೆದಿದ್ದಾನೆ. ನ.15ರಂದು ಶವ ಪತ್ತೆಯಾಗಿದ್ದು, ಗೋಣಿ ಚೀಲ ಖರೀದಿಸಿದ ಅಂಗಡಿಯ ಸುಳಿವಿನ ಆಧಾರದ ಮೇಲೆ ಪೊಲೀಸರು ಪ್ರಕರಣ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ. ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
