ಬೆಳಗಾವಿಯ ಖಂಜರ ಗಲ್ಲಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಸಹಜವಾಗಿ ವರ್ತಿಸುತ್ತಿದ್ದ ಶೂಫಿಯಾನ್ ಅಬ್ದುಲ್ ರಹೀಮ್ ಕಚಿ (23) ಎಂಬ ಯುವಕನನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಪರೀಕ್ಷೆಯಲ್ಲಿ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮಾರ್ಕೆಟ್ ಠಾಣೆ ಪೊಲೀಸರು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸ್ ಸಿಬ್ಬಂದಿಯ ಕಾರ್ಯವನ್ನು ನಗರ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿ ಶ್ಲಾಘಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
