ಗೋವಾ: ಉತ್ತರ ಗೋವಾದ ಕ್ಯಾಲಂಗುಟ್ ಕಡಲತೀರದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ಕು ತಾತ್ಕಾಲಿಕ ಮಳಿಗೆಗಳು ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಘಟನಾ ಸ್ಥಳಕ್ಕೆ ಪ್ರವಾಸೋದ್ಯಮ ಸಚಿವ ರೋಹನ್ ಖೌಂಟೆ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿಯಿಂದ ಹಾನಿಗೊಳಗಾದ ಪ್ರತಿ ಮಳಿಗೆಯ ನಿರ್ವಾಹಕರಿಗೆ ತಲಾ ₹2 ಲಕ್ಷ ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿದೆ. ಶ್ಯಾಕ್‌ಗಳ ಪುನರ್‌ನಿರ್ಮಾಣಕ್ಕೆ ಪ್ರವಾಸೋದ್ಯಮ ಇಲಾಖೆ ಅಗತ್ಯ ಸಹಕಾರ ನೀಡಲಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕೂಡ ಸಂತ್ರಸ್ತರಿಗೆ ನೆರವು ನೀಡುವ ಭರವಸೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

