ಮಂಗಳೂರಿನ ದೇರಳಕಟ್ಟೆ ಬಳಿಯ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದ ಘಟನೆ ನಡೆದಿದೆ. ಗುರುವಾರ ಸಂಜೆ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಿಂದು ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ವಿದ್ಯಾರ್ಥಿನಿಯ ಸಂಬಂಧಿಕರೇ ಆಕೆಯನ್ನು ಅಪಹರಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಹಲವು ಯುವಕರು ಸೇರಿ ವಿದ್ಯಾರ್ಥಿನಿಯನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ, ವಯಸ್ಕರಿಗೆ ತಮ್ಮ ಇಚ್ಛೆಯಂತೆ ಬದುಕುವ ಹಕ್ಕಿದೆ. ಅವರ ಇಚ್ಛೆಗೆ ವಿರುದ್ಧವಾಗಿ ಕುಟುಂಬಸ್ಥರೇ ಅಪಹರಿಸಿದ್ದರೂ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯುವತಿಯನ್ನು ಪತ್ತೆಹಚ್ಚಿ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

