ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಪ್ಪಾಶಿ ನಡುವಿನಮನಿ (35) ಹಾಗೂ ಪತ್ನಿ ರಾಜೇಶ್ವರಿ (30) ಮೃತಪಟ್ಟ ದುರ್ದೈವಿಗಳು. ದಂಪತಿಗೆ ಇಬ್ಬರು ಪುಟ್ಟ ಹೆಣ್ಣು ಮಕ್ಕಳಿದ್ದು, ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ದಂಪತಿ ಹಾಗೂ ಕುಟುಂಬದ ಇತರ ಸದಸ್ಯರ ನಡುವೆ ಹಲವು ವರ್ಷಗಳಿಂದ ಮನಸ್ತಾಪ ಮತ್ತು ಜಗಳಗಳು ನಡೆಯುತ್ತಿದ್ದವು ಎನ್ನಲಾಗಿದೆ. ನಿರಂತರ ಕೌಟುಂಬಿಕ ಕಲಹದಿಂದ ದಂಪತಿ ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ. ಪತಿ ಅಪ್ಪಾಶಿ ಮೃತಪಟ್ಟಿರುವುದನ್ನು ಕಂಡ ಪತ್ನಿ ರಾಜೇಶ್ವರಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

