Breaking News

ಮಹಿಳೆಯ ಅಸ್ಥಿಪಂಜರ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತನಿಖೆಯಲ್ಲಿ ಬಯಲಾಯ್ತು ಎರಡನೇ ಗಂಡನ ಕರಾಳ ಕೃತ್ಯ

ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯ ಅಸ್ಥಿಪಂಜರ ಪ್ರಕರಣಕ್ಕೆ ತಿರುವು ಸಿಕ್ಕಿದೆ. 34 ವರ್ಷದ ಸುಜಾತಾಳನ್ನು ಆಕೆಯ ಎರಡನೇ ಪತಿ ಫಯಾಜ್ ಪಾಷಾ (24) ಕೊಲೆ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಐದು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ದಂಪತಿ ನಡುವೆ ಪತ್ನಿಯ ನಡತೆ ಬಗ್ಗೆ ಅನುಮಾನಗೊಂಡು ಪದೇ ಪದೇ ಜಗಳ ನಡೆಯುತ್ತಿತ್ತು. ಇದೇ ವಿಚಾರವಾಗಿ ಎರಡು ತಿಂಗಳ ಹಿಂದೆ ಪಾರ್ಕ್ ಬಳಿ ಸುಜಾತಾಳಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕೊಲೆ ಬಳಿಕ ಮೃತದೇಹವನ್ನು ನಿರ್ಜನ ಪ್ರದೇಶದಲ್ಲಿ ಬಚ್ಚಿಟ್ಟಿದ್ದ ಆರೋಪಿ ಪರಾರಿಯಾಗಿದ್ದ. ನವೆಂಬರ್ 6ರಂದು ಅಸ್ಥಿಪಂಜರ ಪತ್ತೆಯಾಗಿದ್ದು, ಅದು ಸುಜಾತಾಳದ್ದು ಎಂದು ಗುರುತಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮಲತಂದೆಯ ಕ್ರೌರ್ಯ; 18 ವರ್ಷದ ಮಗನ ಕೊಲೆ, ಮೂರು ದಿನಗಳ ಬಳಿಕ ಬಯಲಾಯ್ತು ಕೃತ್ಯ!

ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 18 ವರ್ಷದ ಯುವಕನನ್ನು ಹತ್ಯೆಗೈದು, ಆತನ ತಾಯಿಯ ಮೇಲೂ ಹಲ್ಲೆ ನಡೆಸಿರುವ ಘಟನೆ …

Leave a Reply

Your email address will not be published. Required fields are marked *