Breaking News

ಬೆಂಗಳೂರಿನಲ್ಲಿ ಯುವಕನ ಬರ್ಬರ ಹತ್ಯೆ; ರೂಮ್‌ಮೇಟ್‌ನಿಂದಲೇ ಕೊಲೆ ಶಂಕೆ!

ಬೆಂಗಳೂರಿನ ಚೌಡೇಶ್ವರಿ ನಗರದಲ್ಲಿ ಯುವಕನೊಬ್ಬನನ್ನು ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ರೂಪೇಶ್ ಕೊಲೆಯಾದ ಯುವಕ. ಆತನ ಜೊತೆಯಲ್ಲೇ ವಾಸವಿದ್ದ ರೂಮ್‌ಮೇಟ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುಮಾರು ಐದಾರು ದಿನಗಳ ಹಿಂದೆ ಕೊಲೆ ನಡೆದಿರುವ ಶಂಕೆಯಿದ್ದು, ಆರೋಪಿ ಮನೆಯ ಬಾಗಿಲಿಗೆ ಬೀಗ ಹಾಕಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ನಂದಿನಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ರೂಪೇಶ್ ಉತ್ತರ ಭಾರತದವನಾಗಿದ್ದು, ಪೇಂಟಿಂಗ್ ಕೆಲಸ ಮಾಡುತ್ತಿದ್ದ. ಕೊಲೆಗೆ ನಿಖರ ಕಾರಣ ಹಾಗೂ ಆರೋಪಿಯ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮಲತಂದೆಯ ಕ್ರೌರ್ಯ; 18 ವರ್ಷದ ಮಗನ ಕೊಲೆ, ಮೂರು ದಿನಗಳ ಬಳಿಕ ಬಯಲಾಯ್ತು ಕೃತ್ಯ!

ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 18 ವರ್ಷದ ಯುವಕನನ್ನು ಹತ್ಯೆಗೈದು, ಆತನ ತಾಯಿಯ ಮೇಲೂ ಹಲ್ಲೆ ನಡೆಸಿರುವ ಘಟನೆ …

Leave a Reply

Your email address will not be published. Required fields are marked *