ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 18 ವರ್ಷದ ಯುವಕನನ್ನು ಹತ್ಯೆಗೈದು, ಆತನ ತಾಯಿಯ ಮೇಲೂ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಸೋಹಮ್ ದಾಸ್ ಕೊಲೆಯಾದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಲತಂದೆ ಸುದೀಪ್‌ನನ್ನು ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 16ರ ರಾತ್ರಿ ಸುದೀಪ್ ಮತ್ತು ಪತ್ನಿ ಸೀಮಾ ದಾಸ್ ನಡುವೆ ಜಗಳ ನಡೆದಿದ್ದು, ಈ ವೇಳೆ ಮಲಮಗನನ್ನು ಕೊಲೆ ಮಾಡಿ ಪತ್ನಿಯ ಮೇಲೂ ಹಲ್ಲೆ ನಡೆಸಿ ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಮೂರು ದಿನಗಳ ಬಳಿಕ ಮನೆ ಮಾಲೀಕರ ಮಾಹಿತಿ ಮೇರೆಗೆ ಪೊಲೀಸರು ಬೀಗ ತೆರೆದು ಪರಿಶೀಲಿಸಿದಾಗ ಬಾತ್‌ರೂಮ್‌ನಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮತ್ತೊಂದು ಕೊಠಡಿಯಲ್ಲಿ ಅನ್ನ, ನೀರಿಲ್ಲದೆ ನರಳುತ್ತಿದ್ದ ಸೀಮಾ ದಾಸ್ ಅವರನ್ನು ರಕ್ಷಿಸಲಾಗಿದೆ. ಸದ್ಯ ಆರೋಪಿ ಬಂಧನವಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
