Breaking News

ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಔಷಧಿ ಮಾಫಿಯಾ ಆರೋಪ; ಸರ್ಕಾರಿ ಆಸ್ಪತ್ರೆಯಲ್ಲೇ ಬಡವರಿಗೆ ಸಾವಿರಾರು ರೂಪಾಯಿ ಹೊರೆ!

ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್) ಆಸ್ಪತ್ರೆಯಲ್ಲಿ ಉಚಿತ ಔಷಧಿಗಳಿದ್ದರೂ ವೈದ್ಯರು ಹೊರಗಿನ ಮೆಡಿಕಲ್ ಶಾಪ್‌ಗಳಿಗೆ ಚೀಟಿ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆಸ್ಪತ್ರೆಯಲ್ಲಿ ಲ್ಯಾಬ್ ಸೌಲಭ್ಯವಿದ್ದರೂ ರೋಗಿಗಳನ್ನು ಖಾಸಗಿ ಲ್ಯಾಬ್‌ಗಳಿಗೆ ಕಳುಹಿಸಲಾಗುತ್ತಿದೆ ಎನ್ನಲಾಗಿದೆ. ರಕ್ತ ಪರೀಕ್ಷೆ, ಸ್ಕ್ಯಾನಿಂಗ್ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಖಾಸಗಿ ಲ್ಯಾಬ್‌ಗಳಿಗೆ ಕಳುಹಿಸುವ ಹಿಂದೆ ಕಮಿಷನ್ ವ್ಯವಹಾರ ನಡೆಯುತ್ತಿದೆ ಎಂಬ ಅನುಮಾನವನ್ನು ರೋಗಿಗಳ ಸಂಬಂಧಿಕರು ವ್ಯಕ್ತಪಡಿಸಿದ್ದಾರೆ. ಇದರಿಂದ ಬಡ ರೋಗಿಗಳು ಸಾವಿರಾರು ರೂಪಾಯಿ ಖರ್ಚು ಮಾಡುವಂತಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ವಿಮ್ಸ್ ನಿರ್ದೇಶಕ ಡಾ. ಮರಿರಾಜ್, ಹೊರಗಿನ ಮೆಡಿಕಲ್‌ಗಳಿಗೆ ಚೀಟಿ ನೀಡುವ ವೈದ್ಯರ ಮಾಹಿತಿ ನೀಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಯುವಕನ ಬರ್ಬರ ಹತ್ಯೆ; ರೂಮ್‌ಮೇಟ್‌ನಿಂದಲೇ ಕೊಲೆ ಶಂಕೆ!

ಬೆಂಗಳೂರಿನ ಚೌಡೇಶ್ವರಿ ನಗರದಲ್ಲಿ ಯುವಕನೊಬ್ಬನನ್ನು ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ರೂಪೇಶ್ ಕೊಲೆಯಾದ ಯುವಕ. ಆತನ ಜೊತೆಯಲ್ಲೇ ವಾಸವಿದ್ದ …

Leave a Reply

Your email address will not be published. Required fields are marked *