Breaking News

ವಿದ್ಯಾರ್ಥಿಯೊಂದಿಗೆ ಅಸಭ್ಯ ವರ್ತನೆ ತೋರಿದ ಆರೋಪಿ ಬಂಧನ

ಶಾಲೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಬಲವಂತವಾಗಿ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ ಆರೋಪದಡಿ ಮಂಜುನಾಥ ಸ್ವಾಮಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ವಿದ್ಯಾರ್ಥಿನಿ ಬಸ್‌ಗಾಗಿ ಕಾಯುತ್ತಿದ್ದಾಗ ಕಾರಿನಲ್ಲಿ ಬಂದ ಆರೋಪಿ ಆಕೆಯನ್ನು ಬಲವಂತವಾಗಿ ಕೂರಿಸಿಕೊಂಡು ಶೃಂಗೇರಿ ಮಾರ್ಗವಾಗಿ ಕರೆದೊಯ್ದಿದ್ದಾನೆ. ಈ ವೇಳೆ ಆತನ ವರ್ತನೆಯನ್ನು ವಿರೋಧಿಸಿದ ಬಾಲಕಿ ಕಾರಿನಿಂದ ಜಿಗಿದಿದ್ದು, ಆಕೆಯ ಕಾಲಿನ ಮೇಲೆ ಕಾರು ಹರಿಸಿ ಆರೋಪಿ ಪರಾರಿಯಾಗಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಅದೇ ಮಾರ್ಗದಲ್ಲಿ ಬಂದ ಬಾಲಕಿಯ ತಾಯಿ ಗಾಯಗೊಂಡ ಮಗಳನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಯುವಕನ ಬರ್ಬರ ಹತ್ಯೆ; ರೂಮ್‌ಮೇಟ್‌ನಿಂದಲೇ ಕೊಲೆ ಶಂಕೆ!

ಬೆಂಗಳೂರಿನ ಚೌಡೇಶ್ವರಿ ನಗರದಲ್ಲಿ ಯುವಕನೊಬ್ಬನನ್ನು ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ರೂಪೇಶ್ ಕೊಲೆಯಾದ ಯುವಕ. ಆತನ ಜೊತೆಯಲ್ಲೇ ವಾಸವಿದ್ದ …

Leave a Reply

Your email address will not be published. Required fields are marked *