Breaking News

KSRTC ಬಸ್ʼಗೆ ಬೈಕ್ ಅಡ್ಡಗಟ್ಟಿ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಯುವಕ! ಸಾರ್ವಜನಿಕರಲ್ಲಿ ಆತಂಕ

ಮಂಡ್ಯ ನಗರದ ಮಹಾವೀರ ವೃತ್ತದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಅಡ್ಡಗಟ್ಟಿ ಯುವಕನೊಬ್ಬ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ಘಟನೆ ನಡೆದಿದೆ. ಯುವಕನ ದಿಢೀರ್ ವರ್ತನೆಯಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಹಾಗೂ ಸಾರ್ವಜನಿಕರು ಕೆಲಕಾಲ ಆತಂಕಕ್ಕೊಳಗಾಗಿದ್ದಾರೆ. ಸಂಚಾರ ದಟ್ಟಣೆಯಿಂದ ಬಸ್ ರಸ್ತೆಯಲ್ಲಿ ನಿಂತಿದ್ದ ವೇಳೆ ಬೈಕ್‌ನಲ್ಲಿ ಬಂದ ಯುವಕ ಬಸ್‌ಗೆ ಅಡ್ಡಲಾಗಿ ವಾಹನ ನಿಲ್ಲಿಸಿ ಘೋಷಣೆ ಕೂಗಿದ್ದಾನೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಸಾರ್ವಜನಿಕ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿ ಆತಂಕ ಸೃಷ್ಟಿಸಿದ ಯುವಕನನ್ನು ಪತ್ತೆಹಚ್ಚಿ, ಘಟನೆ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಯುವಕನ ವರ್ತನೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.

Share News

About BigTv News

Check Also

ಬೆಂಗಳೂರಿನಲ್ಲಿ ಯುವಕನ ಬರ್ಬರ ಹತ್ಯೆ; ರೂಮ್‌ಮೇಟ್‌ನಿಂದಲೇ ಕೊಲೆ ಶಂಕೆ!

ಬೆಂಗಳೂರಿನ ಚೌಡೇಶ್ವರಿ ನಗರದಲ್ಲಿ ಯುವಕನೊಬ್ಬನನ್ನು ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ರೂಪೇಶ್ ಕೊಲೆಯಾದ ಯುವಕ. ಆತನ ಜೊತೆಯಲ್ಲೇ ವಾಸವಿದ್ದ …

Leave a Reply

Your email address will not be published. Required fields are marked *