ಹಾವೇರಿ: ಸಂಬಂಧಿಕರ ಆರೈಕೆಗಾಗಿ ಜಿಲ್ಲಾಸ್ಪತ್ರೆಯಲ್ಲಿ ರಾತ್ರಿ ಉಳಿದುಕೊಂಡಿದ್ದ ಮಹಿಳೆಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಮಹಿಳೆ ನಿದ್ದೆಯಲ್ಲಿದ್ದಾಗ ಮಂಚದ ಕೆಳಗೆ ಅಡಗಿದ್ದ ವ್ಯಕ್ತಿ ಪಕ್ಕದಲ್ಲಿ ಮಲಗಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಏಕಾಏಕಿ ಎಚ್ಚರಗೊಂಡ ಮಹಿಳೆ ಧೈರ್ಯವಾಗಿ ಆತನನ್ನು ಎದುರಿಸಿ ಕಪಾಳಕ್ಕೆ ಬಾರಿಸಿ ಜೋರಾಗಿ ಕೂಗಿಕೊಂಡಿದ್ದಾರೆ. ಸ್ಥಳಕ್ಕೆ ಜನರು ಧಾವಿಸುವಷ್ಟರಲ್ಲಿ ಆರೋಪಿ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಘಟನೆ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎನ್ನಲಾಗಿದ್ದು, ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಜಿಲ್ಲಾಸ್ಪತ್ರೆಯಲ್ಲೇ ಮಹಿಳೆಯರಿಗೆ ಸುರಕ್ಷತೆ ಇಲ್ಲವೇ ಎಂಬ ಪ್ರಶ್ನೆ ಮೂಡಿದ್ದು, ಆಸ್ಪತ್ರೆಯ ಭದ್ರತಾ ವ್ಯವಸ್ಥೆ ಬಲಪಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

