ಬಾದಾಮಿ: ಯರಗೊಪ್ಪ ಎಸ್.ಬಿ. ಗ್ರಾಮದಲ್ಲಿ ಮಧ್ಯರಾತ್ರಿ ಕುರಿ ಕಳ್ಳತನಕ್ಕೆ ಬಂದಿದ್ದ 4ರಿಂದ 5 ಜನರ ದುಷ್ಕರ್ಮಿಗಳ ಗುಂಪು ಚಾಕು ತೋರಿಸಿ ಬೆದರಿಸಿ ಕುರಿಯೊಂದನ್ನು ಕದ್ದೊಯ್ದಿದೆ. ಗ್ರಾಮದ ಎಲ್ಲಪ್ಪ ಶಂಕ್ರಪ್ಪ ಕೊಪ್ಪದ ಅವರಿಗೆ ಸೇರಿದ ಕುರಿದೊಡ್ಡಿಗೆ ನುಗ್ಗಿದ ಕಳ್ಳರು ಈ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಘಟನೆಯಿಂದ ಯರಗೊಪ್ಪ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕ ಮೂಡಿದೆ. ಇತ್ತೀಚೆಗೆ ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರು ಕಳ್ಳತನ ಹೆಚ್ಚುತ್ತಿರುವುದರಿಂದ ರೈತರು ಹಾಗೂ ಪಶುಸಂಗೋಪನೆ ಅವಲಂಬಿತ ಕುಟುಂಬಗಳು ಕಳವಳ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರು ರಾತ್ರಿ ವೇಳೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದು, ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ಪೊಲೀಸರು ರಾತ್ರಿ ಗಸ್ತು ಹೆಚ್ಚಿಸಿ, ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
