ಬೆಂಗಳೂರು ಉತ್ತರ ತಾಲೂಕಿನ ಬೈಯಂಡಹಳ್ಳಿಯಲ್ಲಿ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಪತಿಯೊಬ್ಬ ತನ್ನ ಹೆಂಡತಿಯ ಸ್ನೇಹಿತನ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ. ದಾಳಿಗೆ ಒಳಗಾದ ವ್ಯಕ್ತಿಯನ್ನು ಶಶಿಕುಮಾರ್ ಎಂದು ಗುರುತಿಸಲಾಗಿದೆ. ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುವಾಗ ನವೀನ್ ಪತ್ನಿಗೆ ಶಶಿಕುಮಾರ್ ಪರಿಚಯವಾಗಿತ್ತು. ಇವರಿಬ್ಬರ ನಡುವೆ ಅನೈತಿಕ ಸಂಬಂಧವಿರಬಹುದು ಎಂದು ಶಂಕಿಸಿದ ನವೀನ್, ಆಕ್ರೋಶಗೊಂಡು ಶಶಿಕುಮಾರ್ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ನವೀನ್‌ನನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
