ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ಕಟ್ಟಡ ಕಲ್ಲು ಗಣಿ ಗುತ್ತಿಗೆಗೆ ನಿರಪೇಕ್ಷಣಾ ಪತ್ರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಉಪ ವಲಯ ಅರಣ್ಯಾಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ವಿಶ್ವನಾಥ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಗೌರಿಬಿದನೂರು ತಾಲೂಕಿನ ಜಿ. ಕೊತ್ತೂರು ಗ್ರಾಮದಲ್ಲಿ ಗಣಿ ಗುತ್ತಿಗೆ ಪಡೆಯಲು ಅರ್ಜಿದಾರರೊಬ್ಬರು ನಿರಪೇಕ್ಷಣಾ ಪತ್ರ ಕೇಳಿದ್ದರು. ಇದಕ್ಕಾಗಿ ಅಧಿಕಾರಿ 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು, ಬಳಿಕ 43 ಸಾವಿರ ರೂ.ಗೆ ಒಪ್ಪಿಕೊಂಡಿದ್ದರು. ಅರ್ಜಿದಾರರು ನೀಡಿದ ದೂರಿನ ಮೇರೆಗೆ ನ.20ರಂದು ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, 43 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ವಿಶ್ವನಾಥ್ ಅವರನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
