ಬಳ್ಳಾರಿ: ಅಕ್ರಮ ಸಂಬಂಧದ ಶಂಕೆಯಿಂದ ಸ್ವಂತ ಅಣ್ಣನ ಮೇಲೆಯೇ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಬಳ್ಳಾರಿಯ ಮಂಜುನಾಥ.ಟಿ ಎಂಬಾತನಿಗೆ 1ನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 6 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹15 ಸಾವಿರ ದಂಡ ವಿಧಿಸಿದೆ. ಬ್ರೂಸ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಲಿಂಗ ನಗರದ ಅಂಗನವಾಡಿ ಕೇಂದ್ರದ ಬಳಿ ಈ ಘಟನೆ ನಡೆದಿತ್ತು. ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಒಟ್ಟು 10 ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶ ಎಚ್.ಎ. ಮೋಹನ್ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನವೆಂಬರ್ 20ರಂದು ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಲಕ್ಷ್ಮೀದೇವಿ ಪಾಟೀಲ್ ವಾದ ಮಂಡಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news
