Breaking News

ಜಮೀನಿನ ಬಳಿ ಹೋಗಿದ್ದ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ದುಷ್ಕರ್ಮಿಗಳಿಂದ ಬರ್ಬರ ಹತ್ಯೆ

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಚಿಲ್ಕುಂದ ಗ್ರಾಮದಲ್ಲಿ ಶನಿವಾರ ಸಂಜೆ ಮಹಿಳೆಯೊಬ್ಬರನ್ನು ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಗ್ರಾಮದ ಭಾಗ್ಯಮ್ಮ (50) ಕೊಲೆಯಾದ ಮಹಿಳೆ. ಜಮೀನಿನ ಬಳಿ ಹೋಗಿದ್ದ ಭಾಗ್ಯಮ್ಮ ಅವರನ್ನು ದೇವರಕೆರೆ ಸಮೀಪ ದುಷ್ಕರ್ಮಿಗಳು ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುತ್ರಿ ಪ್ರೀತಿ ನೀಡಿದ ದೂರಿನ ಮೇರೆಗೆ ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Share News

About BigTv News

Check Also

50 ಸಾವಿರಕ್ಕೆ ಡಿಮ್ಯಾಂಡ್; 43 ಸಾವಿರಕ್ಕೆ ಓಕೆ; ಲಂಚ ಪಡೆಯುವಾಗಲೇ ಅಧಿಕಾರಿ ಲಾಕ್

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ಕಟ್ಟಡ ಕಲ್ಲು ಗಣಿ ಗುತ್ತಿಗೆಗೆ ನಿರಪೇಕ್ಷಣಾ ಪತ್ರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಉಪ ವಲಯ …

Leave a Reply

Your email address will not be published. Required fields are marked *