Breaking News

ವಿದ್ಯುತ್ ಸಂಪರ್ಕ ಪರಿಶೀಲನೆಗೆ ತೆರಳಿದ್ದ ಮೆಸ್ಕಾಂ ಎಇಇ ಮೇಲೆ ಹಲ್ಲೆಗೆ ಯತ್ನ; ದೂರು ದಾಖಲು

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳುಗೋಡು ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ಸ್ಥಳ ಪರಿಶೀಲನೆಗೆ ತೆರಳಿದ್ದ ಮೆಸ್ಕಾಂ ಎಇಇ ಮೇಲೆ ವ್ಯಕ್ತಿಯೊಬ್ಬ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಸಲುವಾಗಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದಾಗ, ಪಕ್ಕದ ಮನೆಯ ವ್ಯಕ್ತಿ ಅಧಿಕಾರಿಯನ್ನು ತಳ್ಳಿ ಹಲ್ಲೆಗೆ ಯತ್ನಿಸಿದ್ದಾನೆ. ಅಲ್ಲದೆ, ತಮ್ಮ ಮನೆಯ ವಿದ್ಯುತ್ ಕಂಬದಿಂದ ಸಂಪರ್ಕ ನೀಡದಂತೆ ಬೆದರಿಕೆ ಹಾಕಿದ್ದಾನೆ. ಘಟನೆಯ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About BigTv News

Check Also

50 ಸಾವಿರಕ್ಕೆ ಡಿಮ್ಯಾಂಡ್; 43 ಸಾವಿರಕ್ಕೆ ಓಕೆ; ಲಂಚ ಪಡೆಯುವಾಗಲೇ ಅಧಿಕಾರಿ ಲಾಕ್

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ಕಟ್ಟಡ ಕಲ್ಲು ಗಣಿ ಗುತ್ತಿಗೆಗೆ ನಿರಪೇಕ್ಷಣಾ ಪತ್ರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಉಪ ವಲಯ …

Leave a Reply

Your email address will not be published. Required fields are marked *