ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಮದ್ಯದಂಗಡಿಯೊಂದರಲ್ಲಿ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಚೂರಿ ಇರಿತದೊಂದಿಗೆ ಅಂತ್ಯಗೊಂಡಿದೆ. ಘಟನೆಯಲ್ಲಿ ತೂಚಮಕೇರಿಯ ಸಿ. ದೀಪು (46) ಗಂಭೀರವಾಗಿ ಗಾಯಗೊಂಡಿದ್ದಾರೆ. ಹರಿಹರ ಗ್ರಾಮದ ಎಂ. ಕಾಳಪ್ಪ ಮತ್ತು ದೀಪು ನಡುವೆ ಜಗಳ ನಡೆದಿದ್ದು, ಈ ವೇಳೆ ಕಾಳಪ್ಪ ಚಾಕುವಿನಿಂದ ದೀಪು ಅವರ ಹಣೆ, ಹೊಟ್ಟೆ, ತೋಳು ಹಾಗೂ ಬೆನ್ನಿನ ಭಾಗಕ್ಕೆ ಇರಿದಿದ್ದಾನೆ ಎನ್ನಲಾಗಿದೆ. ಗಾಯಗೊಂಡ ದೀಪು ಅವರಿಗೆ ಗೋಣಿಕೊಪ್ಪಲು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪೊನ್ನಂಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
