Breaking News

ವಾಲಿಬಾಲ್‌ ಕೋಚ್‌ ನಿಂದಲೇ ಪೈಶಾಚಿಕ ಕೃತ್ಯ – ಹೈಸ್ಕೂಲ್‌ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ!

ಕೋಲಾರ: ಶಾಲೆಯೊಂದರಲ್ಲಿ ವಾಲಿಬಾಲ್ ಕೋಚ್ ಆಗಿದ್ದ ಶಶಿಕುಮಾರ್ ಎಂಬಾತ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದು, ಘಟನೆ ಜಿಲ್ಲೆಯಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯಕೀಯ ತಪಾಸಣೆಯಲ್ಲಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಬಳಿಕ ಬಾಲಕಿ ವಿಚಾರಿಸಿದಾಗ ಕೋಚ್‌ನ ಕೃತ್ಯ ಬೆಳಕಿಗೆ ಬಂದಿದೆ. ಬಾಲಕಿಯ ಅಜ್ಜಿ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿದ್ದ ಆರೋಪಿ ಶಶಿಕುಮಾರ್‌ನನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ದುಡ್ಡು ಕೊಡದೇ ವೋಟ್ ಹಾಕಲ್ಲ ನೀನು!- ಅಭಿವೃದ್ಧಿ ಪ್ರಶ್ನಿಸಿದ ಮತದಾರನ ಮೇಲೆ ಶಾಸಕ ಚಂದ್ರಪ್ಪ ಗರಂ!-

ಚಿತ್ರದುರ್ಗ ಜಿಲ್ಲೆಯ ಕೋಗುಂಡೆ ಗ್ರಾಮದಲ್ಲಿ ಅಭಿವೃದ್ಧಿ ಕುರಿತು ಪ್ರಶ್ನಿಸಿದ ಯುವಕನ ಮೇಲೆ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಗರಂ ಆಗಿದ್ದಾರೆ. …

Leave a Reply

Your email address will not be published. Required fields are marked *