ತುಮಕೂರು: ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಮರಳಿದ್ದ 33 ವರ್ಷದ ಮುತ್ತುರಾಜ್ ಎಂಬ ಯುವಕನನ್ನು ಮನೆಯ ಮುಂದೆ ಮಲಗಿದ್ದಾಗ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ತುಮಕೂರು ಗ್ರಾಮಾಂತರದ ಜಕ್ಕೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಮುತ್ತುರಾಜ್ ಮೂರು ದಿನಗಳ ಹಿಂದಷ್ಟೇ ಗ್ರಾಮಕ್ಕೆ ಮರಳಿದ್ದರು. ಸೋಮವಾರ ಬೆಳಗ್ಗೆ ಸಹೋದರಿ ಎಬ್ಬಿಸಲು ಹೋದಾಗ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಕುಟುಂಬದವರ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತನ ತಾಯಿ ಶಿವಮ್ಮ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
