ತುಮಕೂರು: ಪಾವಗಡ ಪೊಲೀಸ್ ಠಾಣೆಯಲ್ಲಿ ವಿಚಾರಣೆಗಾಗಿ ಬಂದಿದ್ದ ಯುವಕನ ಮೇಲೆ ಆತನ ಭಾವ ಮಂಜುನಾಥ ಖಾರದ ಪುಡಿ ಎರಚಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ನವೀನ್ ಅವರ ಬಲಗೈ ಬೆರಳಿಗೆ ಗಾಯವಾಗಿದೆ. ಮಂಜುನಾಥ ತನ್ನ ಪತ್ನಿ ಮಧುಶ್ರೀಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಆರೋಪವಿದ್ದು, ಈ ಸಂಬಂಧ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಭಾನುವಾರ ವಿಚಾರಣೆಗಾಗಿ ಠಾಣೆಗೆ ಬಂದಿದ್ದ ವೇಳೆ ನವೀನ್ ಮೇಲೆ ಹಲ್ಲೆ ನಡೆಸಿದ್ದಾನೆ. ಪೊಲೀಸರ ಎದುರೇ ಹಲ್ಲೆ ನಡೆದಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ನವೀನ್ ಕುಟುಂಬಸ್ಥರು ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
