ತುಮಕೂರು: ಮಗನಿಗೆ ಬುದ್ಧಿ ಕಲಿಸಲು ಹೋಗಿ ತಾಯಿಯೇ ಆತನನ್ನು ಕೊಲೆಗೈದ ಘಟನೆ ತುಮಕೂರು ತಾಲೂಕಿನ ಜಕ್ಕೇನಹಳ್ಳಿಯಲ್ಲಿ ನಡೆದಿದೆ. ಮಗ ಮುತ್ತುರಾಜ್ ಕೊಲೆ ಆರೋಪದ ಮೇಲೆ ತಾಯಿ ಶಿವಮ್ಮಳನ್ನು ಪೊಲೀಸರು ಬಂಧಿಸಿದ್ದಾರೆ. ಮುತ್ತುರಾಜ್ ವಿವಾಹಿತ ಮಹಿಳೆಯೊಬ್ಬಳನ್ನು ಪ್ರೀತಿಸುತ್ತಿದ್ದು, ಆಕೆಯನ್ನೇ ಮದುವೆಯಾಗುವುದಾಗಿ ಹೇಳುತ್ತಿದ್ದ. ಇದರಿಂದ ಬೇಸರಗೊಂಡ ತಾಯಿ, ರಾತ್ರಿ ಮನೆಯ ಹೊರಗೆ ಮಲಗಿದ್ದ ಮಗನ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾಳೆ. ಮರುದಿನ ಏನೂ ತಿಳಿಯದವಳಂತೆ ನಾಟಕವಾಡಿದ್ದ ತಾಯಿಯ ಕೃತ್ಯ ಸಿಸಿಟಿವಿ ದೃಶ್ಯಾವಳಿಗಳಿಂದ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಪೊಲೀಸರು ಶಿವಮ್ಮಳನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
