ಬಳ್ಳಾರಿಯಲ್ಲಿ ಲಕ್ಷ್ಮೀ ಪೂಜೆ ಹೆಸರಿನಲ್ಲಿ ಯುವತಿಯರಿಗೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಪ್ರಕರಣದ ಪ್ರಮುಖ ಆರೋಪಿ ಕಮ್ಮಾರ ಕೃಷ್ಣಮಾಚಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಶ್ರೀಶೈಲಂನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ಬಳ್ಳಾರಿಗೆ ಕರೆತರಲಾಗಿದೆ. ಕನ್ಯೆಯರು ಲಕ್ಷ್ಮೀ ಪೂಜೆ ಮಾಡಿದರೆ ಹಣದ ಮಳೆಯಾಗುತ್ತದೆ ಎಂದು ನಂಬಿಸಿ ಯುವತಿಯರನ್ನು ಗುರಿಯಾಗಿಸಿಕೊಂಡು ದೌರ್ಜನ್ಯ ಎಸಗುತ್ತಿದ್ದ ಆರೋಪ ಈತನ ಮೇಲಿದೆ. ಯುವತಿಯರ ಬೆತ್ತಲೆ ಫೋಟೋ ಹಾಗೂ ವಿಡಿಯೋಗಳನ್ನು ಮಾಡಿಸಿಕೊಂಡು ವಂಚಿಸುತ್ತಿದ್ದ ಎನ್ನಲಾಗಿದೆ. ಈ ಪ್ರಕರಣದಲ್ಲಿ ಅಕ್ಕ ಪಡೆ ಮಹಿಳಾ ಪೊಲೀಸರು ಯುವತಿಯರ ವೇಷದಲ್ಲಿ ಕಾರ್ಯಾಚರಣೆ ನಡೆಸಿದ್ದರು. ಪ್ರಮುಖ ಆರೋಪಿ ಸೇರಿದಂತೆ ಈವರೆಗೆ ಒಟ್ಟು 15 ಮಂದಿಯನ್ನು ಬಂಧಿಸಲಾಗಿದ್ದು, ಬಳ್ಳಾರಿ ಎಪಿಎಂಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
