ಯಾದಗಿರಿಯ ಅಶೋಕ ನಗರ ಪ್ರದೇಶದಲ್ಲಿ ಸಿಎಚ್ ಪೌಡರ್ ಮಿಶ್ರಿತ ಸೇಂದಿ ಮಾರಾಟ ಮಾಡುತ್ತಿದ್ದ ಜಾಫರ್ ಸಾದಿಕ್ (43) ಎಂಬಾತನನ್ನು ನೇತಾಜಿ ನಗರ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ. ಈ ವೇಳೆ 1 ಲೀಟರ್‌ನ 38 ಪ್ಲಾಸ್ಟಿಕ್ ಬಾಟಲಿಗಳಲ್ಲಿ ತುಂಬಿದ್ದ ಸಿಎಚ್ ಪೌಡರ್ ಮಿಶ್ರಿತ ಸೇಂದಿಯನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿ ವೇಳೆ ಕೆಲವರು ಪರಾರಿಯಾಗಿದ್ದಾರೆ. ಈ ಸಂಬಂಧ ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
