ಮಂಗಳೂರು ನಗರದ ಮಹಿಳಾ ಪೊಲೀಸರು ಹಾಗೂ ಘಟ್ಟದ ಭಾಗದ ಪೊಲೀಸ್ ಸಿಬ್ಬಂದಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಪೊಲೀಸ್ ಕಮಿಷನರ್ ಕಾರು ಚಾಲಕ ಅರುಣ್ ಆಳ್ವ ಅವರನ್ನು ಅಮಾನತುಗೊಳಿಸಲಾಗಿದೆ. ಆಡಿಯೊ ವೈರಲ್ ಆದ ಬೆನ್ನಲ್ಲೇ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಈ ಆದೇಶ ಹೊರಡಿಸಿದ್ದಾರೆ. ನೆಹರು ಮೈದಾನದಲ್ಲಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಎಟಿಎಂ ಕಾರ್ಡ್ ದೋಚಿದ ಆರೋಪದ ಮೇಲೆ ಮೂವರು ಕಾನ್‌ಸ್ಟೇಬಲ್‌ಗಳನ್ನು ಬಂಧಿಸಲಾಗಿತ್ತು. ಈ ವಿಚಾರವಾಗಿ ಫೋನ್‌ನಲ್ಲಿ ಮಾತನಾಡುವಾಗ ಅರುಣ್ ಆಳ್ವ ಆಕ್ಷೇಪಾರ್ಹ ಪದಗಳನ್ನು ಬಳಸಿರುವುದು ಆಡಿಯೊದಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಅರುಣ್ ಅವರನ್ನು ಅಮಾನತುಗೊಳಿಸಿ, ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
