ಕಾಸರಗೋಡು: ಶೂ ಒಳಗೆ ಮಿಶ್ರಣ ರೂಪದಲ್ಲಿ ಅಡಗಿಸಿಟ್ಟು ಸಾಗಿಸುತ್ತಿದ್ದ 1.37 ಕೋಟಿ ರೂ. ಮೌಲ್ಯದ ಚಿನ್ನವನ್ನು ಕೋಝಿಕ್ಕೋಡ್‌ನ ಕರಿಪುರ ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ನಿವಾಸಿ ನೌಶಾದ್ (43) ಎಂಬಾತನನ್ನು ಬಂಧಿಸಿದ್ದಾರೆ. ರಹಸ್ಯ ಮಾಹಿತಿಯ ಮೇರೆಗೆ ಶಾರ್ಜಾದಿಂದ ಬಂದಿಳಿದ ನೌಶಾದ್‌ನನ್ನು ಅಧಿಕಾರಿಗಳು ತಪಾಸಣೆ ನಡೆಸಿದಾಗ, ಆತನ ಶೂ ಒಳಗೆ ಅಡಗಿಸಿಟ್ಟಿದ್ದ ಚಿನ್ನ ಪತ್ತೆಯಾಗಿದೆ. ಪರಿಶೀಲನೆ ವೇಳೆ ಮಿಶ್ರಣದಿಂದ 1.085 ಕೆ.ಜಿ. ಚಿನ್ನವನ್ನು ಹೊರತೆಗೆಯಲಾಗಿದ್ದು, ಇದರ ಮಾರುಕಟ್ಟೆ ಮೌಲ್ಯ ಸುಮಾರು 1.37 ಕೋಟಿ ರೂ. ಎಂದು ಅಂದಾಜಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
