ಚಾಮರಾಜನಗರ: ಜೂಜಾಟ ತಡೆಯಲು ತೆರಳಿದ್ದ ಪೊಲೀಸರ ಮೇಲೆಯೇ ಜೂಜುಕೋರರ ತಂಡ ಹಲ್ಲೆ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗಡಿಭಾಗದ ತಮಿಳುನಾಡಿನ ಕೊಂಗಳ್ಳಿಬೆಟ್ಟ ಸಮೀಪ ನಡೆದಿದೆ. ಘಟನೆಯಲ್ಲಿ ಪಿಎಸ್‌ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಕಾರ್ತಿಕ ಮಾಸದ ಹಿನ್ನೆಲೆಯಲ್ಲಿ ಕೊಂಗಳ್ಳಿಬೆಟ್ಟಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ವೇಳೆ ದೇವಾಲಯದ ಬಳಿ ಜೂಜಾಟ ನಡೆಯುತ್ತಿರುವ ಮಾಹಿತಿ ಪಡೆದ ತಾಳವಾಡಿ ಪೊಲೀಸರು ಸ್ಥಳಕ್ಕೆ ತೆರಳಿದ್ದರು. ಆಗ ಜೂಜುಕೋರರ ತಂಡ ಪೊಲೀಸರನ್ನು ಸುತ್ತುವರಿದು ಹಲ್ಲೆ ನಡೆಸಿದೆ. ಹಲ್ಲೆಯಲ್ಲಿ ಪಿಎಸ್‌ಐ ವಾಸು ಹಾಗೂ ಕಾನ್‌ಸ್ಟೇಬಲ್‌ಗಳಾದ ಮಾರ್ಟಿನ್ ಮತ್ತು ರಮೇಶ್ ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ತಾಳವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

