ನವದೆಹಲಿ: ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ರದ್ದುಗೊಳಿಸಿರುವ ನ್ಯಾಯಾಲಯ, ಎರಡು ವಾರಗಳ ಒಳಗಾಗಿ ಶರಣಾಗುವಂತೆ ಸೂಚಿಸಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ ವಿನಯ್ ಕುಲಕರ್ಣಿ ಅವರಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಅಲ್ಲದೆ, ಕೆಳಹಂತದ ನ್ಯಾಯಾಲಯದ ಶಿಕ್ಷೆಯ ಆದೇಶವನ್ನೂ ಅಮಾನತಿನಲ್ಲಿಟ್ಟಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಹಾಗೂ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ. ಮುಂದಿನ ಎರಡು ವಾರಗಳೊಳಗೆ ಸಂಬಂಧಪಟ್ಟ ನ್ಯಾಯಾಲಯ ಅಥವಾ ತನಿಖಾ ಸಂಸ್ಥೆಯ ಮುಂದೆ ಶರಣಾಗುವಂತೆ ವಿನಯ್ ಕುಲಕರ್ಣಿ ಅವರಿಗೆ ಗಡುವು ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
